ಪುತ್ತೂರು: ಅಕ್ರಮ ಜಾನುವಾರು ಸಾಗಾಟ ➤‌ ಓರ್ವ ಅಂದರ್

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 25. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಮುರ ರೈಲ್ವೇ ಬ್ರಿಡ್ಜ್ ಸಮೀಪದಲ್ಲಿ ಇಂದು ಮುಂಜಾನೆ ನಡೆದಿದೆ.

ಪುತ್ತೂರು ನಗರ ಠಾಣಾ ಪಿಎಸ್ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಠಾಣಾ ನಿರೀಕ್ಷಕರಾದ ಸುನೀಲ್ ಕುಮಾರ್, ಪಿಎಸ್ಐ ಶ್ರೀಕಾಂತ್ ರಾಥೋಡ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Also Read  ಪರೀಕ್ಷೆ ಇಲ್ಲದೇ ಪಾಸ್ ➤ ಕುಂಬಳಕಾಯಿ ಹೊಡೆದು ಪಿಯು ವಿದ್ಯಾರ್ಥಿಗಳ ಸಂಭ್ರಮ

error: Content is protected !!
Scroll to Top