ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ➤‌ ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 27. ಇಲ್ಲಿನ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಸೆ. 26ರ ಸೋಮವಾರದಂದು ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯು ಹಲ್ಲೆ ನಡೆಸಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Also Read  ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ವರ್ಗಾವಣೆ

error: Content is protected !!