ಧರ್ಮಸ್ಥಳ: ಕಾಡಿನಲ್ಲಿ ವೀಡಿಯೋ ಮಾಡುತ್ತಾ ವಿಷ ಸೇವಿಸಿದ ಯುವಕ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಸೆ. 29. ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೇ ಅದನ್ನು ಕುಟುಂಬಸ್ಥರಿಗೆ ಕಳುಹಿಸಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಪೊಲೀಸರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ವರದಿಯಾಗಿದೆ.

 

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್‌ ಪುರದ ನಿವಾಸಿ ಸುನಿಲ್‌ (28) ಎಂಬಾತ ಬೈಕ್ ನಲ್ಲಿ ಬುಧವಾರದಂದು ಬೆಳಗ್ಗೆ ಧರ್ಮಸ್ಥಳಕ್ಕೆ ಬಂದು, ದೇವರ ದರ್ಶನ ಮುಗಿಸಿ ಮಧ್ಯಾಹ್ನದ ವೇಳೆಗೆ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿಯುತ್ತಾ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಧರ್ಮಸ್ಥಳ ದೇವರ ದರ್ಶನ ಪಡೆದ ಫೋಟೋ, ಮಹಾತ್ಮ ಗಾಂಧಿ ವೃತ್ತದ ಪೋಟೋಗಳನ್ನು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದರು. ತಕ್ಷಣವೇ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಧರ್ಮಸ್ಥಳ ಠಾಣಾ ಸಬ್‌ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಮತ್ತು ಸಿಬ್ಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿ, ಆತನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುನಿಲ್‌ ಊರಿನಲ್ಲಿ ಚಪ್ಪಲಿ ಅಂಗಡಿಯನ್ನು ಹೊಂದಿದ್ದು, ಮದುವೆಯಾಗಿ ಮೂರು ತಿಂಗಳ ಮಗು ಕೂಡಾ ಇದ್ದು, ದಂಪತಿ ನಡುವೆ ಉಂಟಾದ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ

error: Content is protected !!
Scroll to Top