ಕಡಬ: ಹೈಸ್ಕೂಲ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ➤‌ ಯುವಕರಿಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.04. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಬ್ಬರು ವ್ಯಕ್ತಿಗಳನ್ನು ಕಡಬ ಠಾಣಾ ಪೋಲಿಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ.

ನೂಜಿಬಾಳ್ತಿಲದ ಖಾಸಗಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಯುವಕನೋರ್ವ ಪುಸಲಾಯಿಸಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ‌‌ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರ ಊರಿನವನಾಗಿದ್ದು, ಆತನಿಗೆ ಆಶ್ರಯ ನೀಡಿದ್ದ ಸ್ಥಳೀಯ ಯುವಕ ಹಾಗೂ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

error: Content is protected !!

Join the Group

Join WhatsApp Group