ಬೆಳ್ತಂಗಡಿ: ಕೆರೆಗೆ ಬಿದ್ದು ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ನಾರಾವಿ, ಅ 09. ಯುವತಿಯೊರ್ವರು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಮೃತಪಟ್ಟ ದಾರುಣ ಘಟನೆ ನಾರಾವಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ. ಸದಸ್ಯ ರಾಜವರ್ಮ ಜೈನ್ ಅವರ ಪುತ್ರಿ ಸುರಕ್ಷಾ ಜೈನ್ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವೇಣೂರು ಪೋಲಿಸ್ ಠಾಣಾ ಉಪನಿರೀಕ್ಷಕಿ ಸೌಮ್ಯ ಜೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಸಹಾಯಧನ ➤ ಗಿರಿರಾಜ ಕೋಳಿ ವಿತರಣೆ

error: Content is protected !!