ಅರಂತೋಡು: ಪ್ರವಾದಿ ಪೈಗಂಬರರ ಜನ್ಮದಿನಾಚರಣೆ ಪ್ರಯುಕ್ತ ಮದರಸ, ವಿದ್ಯಾರ್ಥಿಗಳಿಂದ ಕಲಾ ಸಾಹಿತ್ಯಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 09. ನುಸ್ರತುಲ್ ಇಸ್ಲಾಂ ಮದರಸ, ಬದ್ರಿಯಾ ಜುಮಾ ಮಸ್ಜಿದ್ ಅರಂತೋಡು ಹಾಗು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಇದರ ಜಂಟಿ ಆಶ್ರಯದಲ್ಲಿ ಈದ್ ಮೀಲಾದ್ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಕಲಾಸಾಹಿತ್ಯ ಸ್ಪರ್ಧಾ ಕಾರ್ಯಕ್ರಮಕ್ಕೆ ದುವಾ ಮೂಲಕ ಖತೀಬರಾದ ಅಲ್ ಹಾಜ್ ಇಸಾಕ್ ಬಾಖವಿ ಚಾಲನೆ ನೀಡಿದರು.

 

ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಮದರಸ ಸದರ್ ಸ-ಅದ್ ಫೈಝಿ, ಸಹಾಯಕ ಅಧ್ಯಾಪಕ ಸಾಜಿದ್ ಅಝ್ಹರಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅತಿಥಿಯಾಗಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಎ.ಎಚ್.ವೈ.ಎ ಅಧ್ಯಕ್ಷ ಅಬ್ದುಲ್ ಮಜೀದ್, ಜಮಾಅತ್ ಕಾರ್ಯದರ್ಶಿ ಕೆ.ಎಂ. ಮೂಸಾನ್, ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಜಮಾಅತ್ ಉಪಾಧ್ಯಕ್ಷರಾದ ಹಾಜಿ ಕೆ.ಎಂ ಮುಹಮ್ಮದ್, ಮಾಜಿ ಅಧ್ಯಕ್ಷರಾದ ಹಾಜಿ ಅಹಮದ್ ಕುಂಞಿ, ಆಶಿಕ್ ಕುಕ್ಕುಂಬಳ , ಕೆ.ಎಂ. ಅಬೂಬಕ್ಕರ್ ಪಾರೆಕ್ಕಲ್, ತಾಜುದ್ದೀನ್ ಅರಂತೋಡು , ಫಸೀಲು ಮೊದಲಾದವರು ಉಪಸ್ಥಿತರಿದ್ದರು.

Scroll to Top