(ನ್ಯೂಸ್ ಕಡಬ) newskadaba.com ನವದೆಹಲಿ, ಅ. 13. ಕರ್ನಾಟಕದ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸಿದ್ದು , ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರು ವಿಭಿನ್ನ ತೀರ್ಪು ನೀಡಿದ್ದಾರೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರ ತೀರ್ಪು ಕರ್ನಾಟಕ ಹೈಕೋರ್ಟ್‌ನ ಹಿಜಾಬ್ ನಿಷೇಧದ ತೀರ್ಪನ್ನು ಎತ್ತಿಹಿಡಿದಿದೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ ಸುಧಾಂಶು ಧುಲಿಯಾ, ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದು ಮತ್ತು ಕರ್ನಾಟಕ ಸರ್ಕಾರಿ ಆದೇಶವನ್ನು ರದ್ದುಗೊಳಿಸಿದ್ದೇನೆ. ಅಗತ್ಯ ಧಾರ್ಮಿಕ ಆಚರಣೆ ಕುರಿತು ಚಿಂತಿಸುವ ಅಗತ್ಯವಿಲ್ಲ ಮತ್ತು ನ್ಯಾಯಾಲಯ (ಕರ್ನಾಟಕ ಹೈಕೋರ್ಟ್) ತಪ್ಪು ಹೆಜ್ಜೆ ಇರಿಸಿದೆ. ನನಗೆ ಹೆಣ್ಣು ಮಗುವಿನ ಶಿಕ್ಷಣವೇ ಉನ್ನತ ಆದ್ಯತೆಯ ವಿಚಾರ ಎಂದು ಹೇಳಿದ್ದಾರೆ. ಹೀಗೆ ವಿಭಿನ್ನ ಅಭಿಪ್ರಾಯ ಬಂದ ಹಿನ್ನಲೆ ಈ ಪ್ರಕರಣ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಅರ್ಜಿಗಾಗಿ ಇರಿಸಬೇಕಾಗುತ್ತದೆ. ಇನ್ನು ಅಲ್ಲಿಯವರೆಗೆ ಹೈಕೋರ್ಟ್ ತೀರ್ಪು ಯಥಾಸ್ಥಿತಿ ಎಂದಿರುವ ಸುಪ್ರೀಂಕೋರ್ಟ್, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದಾರೆ.