(ನ್ಯೂಸ್ ಕಡಬ) newskadaba.com ಕಡಬ, ಅ.17. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಪುತ್ತೂರಿನಲ್ಲಿ ನಡೆದಿದೆ.
ರೈಲು ನೇರಳಕಟ್ಟೆ ತಲುಪಿದ ವೇಳೆ ವ್ಯಕ್ತಿಯೋರ್ವರು ರೈಲಿನಡಿಗೆ ಬಿದ್ದುದನ್ನು ಗಮನಿಸಿದ ಲೋಕೋ ಪೈಲಟ್ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಿದ್ದು, ದಾರಿ ಮಧ್ಯೆ ವ್ಯಕ್ತಿ ಮೃತಪಟ್ಟಿದ್ದಾರೆ.