ಕೊಯಿಲ: ಬೈಕ್ ಹಾಗೂ ಗೂಡ್ಸ್ ಟೆಂಪೋ ನಡುವೆ ಢಿಕ್ಕಿ ➤‌ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 25. ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕೊಯಿಲ ಪೇಟೆ ಸಮೀಪದ ಕುದ್ಮಾಣಿ ಕಿರು ಸೇತುವೆ ಬಳಿ ಇಂದು ಮಧ್ಯಾಹ್ನ‌ ನಡೆದಿದೆ.







ಮೃತರನ್ನು ತೆಂಕಮಿಜಾರು ಬರ್ಕೆ ನಿವಾಸಿ ಗುಣಪಾಲ ಸೇಮಿತ ಅವರ ಪುತ್ರ ದಿನೇಶ ಸೇಮಿತ (32) ಎಂದು ಗುರುತಿಸಲಾಗಿದೆ. ಇವರು ಮೂಡಬಿದ್ರೆ ಕಡೆಯಿಂದ ಬಂಟ್ವಾಳ ಕಡೆಗೆ ಬರುತ್ತಿದ್ದ ವೇಳೆ, ವಿರುದ್ದ ದಿಕ್ಕಿನಿಂದ ಹೋಗುತ್ತಿದ್ದ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆ ರಸ್ತೆಗೆ ಬಡಿದು ತೀವ್ರ ರಕ್ತಸ್ರಾವವುಂಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರಿ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top