ಚಾಕೊಲೇಟ್ ಕದ್ದ ವಿಡಿಯೋ ವೈರಲ್ ➤‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕೊಲ್ಕತ್ತ, ನ.01: ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು ಎನ್ನುವಂತೆ ಒಂದು ಚಾಕೊಲೇಟ್​ಗೆ ಹೋದ ಮರ್ಯಾದೆಗೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಷಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯಲ್ಲಿ ನಡೆದಿದೆ.

ಸಹೋದರಿಯೊಂದಿಗೆ ಶಾಪಿಂಗ್ ಮಾಲ್ ಗೆ ತೆರಳಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಈ ವೇಳೆ ಚಾಕೊಲೇಟ್ ಕದ್ದಿದ್ದು, ಇದರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವಮಾನ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ವಿದ್ಯಾರ್ಥಿನಿಯ ಸಾವನ್ನು ಖಂಡಿಸಿದ ಸ್ಥಳೀಯರು ಶಾಪಿಂಗ್ ಮಾಲ್‌ನ ಹೊರಗೆ ಪ್ರತಿಭಟನೆ ನಡೆಸಿದ್ದು, ವಿಡಿಯೋ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

Scroll to Top