ಕಾಂಗ್ರೆಸ್​ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಕೋರ್ಟ್​​ ಆದೇಶ

(ನ್ಯೂಸ್ ಕಡಬ) newskadaba.com ನ.08: ಕೆಜಿಎಫ್-2 ಚಿತ್ರದ ಹಾಡನ್ನು ಅಕ್ರಮವಾಗಿ ಬಳಸಿಕೊಂಡು ಎಂಆರ್‌ಟಿ ಮ್ಯೂಸಿಕ್ ಕಂಪನಿಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ನ್ಯಾಯಾಲಯವು ಟ್ವಿಟರ್‌ಗೆ ಸೂಚಿಸಿದೆ.

ಇತ್ತೀಚೆಗೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಬಂದಿದ್ದರು. ಅವರು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿತ್ತು. ಈ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿತ್ತು. ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ನವರು ಫೋರ್ಜರಿ ಪ್ರಕರಣ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.

ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿದೆ. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್​ ಪರಿಗಣಿಸಿದೆ. ಹೀಗಾಗಿ, ನವೆಂಬರ್ 21ರವರೆಗೆ ಕಾಂಗ್ರೆಸ್​ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವಂತೆ ಕೋರ್ಟ್ ಸೂಚಿಸಿದೆ.

Also Read  ಮರಿಯೊಂದಿಗೆ ಚಿರತೆ ಪ್ರತ್ಯಕ್ಷ      ಗ್ರಾಮಸ್ಥರಿಗೆ ಆತಂಕ              

error: Content is protected !!
Scroll to Top