ಕಡಬ: ನಿಲ್ಲಿಸಿದ್ದ ಕಾರಿಗೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ನ.28. ಪಂಕ್ಚರ್ ಆಗಿ ನಿಲ್ಲಿಸಿದ್ದ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕು ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಸಮೀಪದ ಪದವು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಕಡಬದಿಂದ ಕುಂತೂರು ಕಡೆಗೆ ತೆರಳುತ್ತಿದ್ದ ಬೈಕ್ ಪದವು ಸಮೀಪ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಕುಂತೂರು ನಿವಾಸಿ ಖಾದರ್ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

Also Read  08.10.2020 News Highlights

 

error: Content is protected !!
Scroll to Top