ಮಂಗಳೂರು ಸೆನ್ ಕ್ರೈಂ ಠಾಣಾ ಎಎಸ್ಐ ಆಗಿ ಶೀನಪ್ಪ ಪೂಜಾರಿ ಮುಂಭಡ್ತಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 02. ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯ ಎಎಸ್‌ಐಯಾಗಿ ಸವಣೂರು- ಪುಣ್ಚಪ್ಪಾಡಿ ದೇವಸ್ಯ ಶೀನಪ್ಪ ಪೂಜಾರಿ ಅವರು ಮುಂಭಡ್ತಿ ಹೊಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಶೀನಪ್ಪ ಪೂಜಾರಿ ದೇವಸ್ಯರವರು 1996ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಾವೂರು ಪೊಲೀಸ್ ಠಾಣೆ, ಜಿಲ್ಲಾ ಅಪರಾಧ ಪತ್ತೆದಳ, ಕದ್ರಿ ಪೊಲೀಸ್ ಠಾಣೆ, ಮಂಗಳೂರು ನಗರ ಸಿಸಿಬಿ ಕ್ರೈಂ ಬ್ರಾಂಚ್‌ನಲ್ಲಿ ಕರ್ತವ್ಯ ನಿರ್ವಹಿಸಿ, ಇದೀಗ ಎಎಸ್‌ಐಯಾಗಿ ಮುಂಭಡ್ತಿ ಹೊಂದಿದ್ದಾರೆ. ಇವರು ಕಳೆದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Scroll to Top