ಸುಳ್ಯ: ನಿವೃತ್ತ ಫಾರೆಸ್ಟರ್ ಅಧಿಕಾರಿಯ ಪುತ್ರ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 03. ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಬೆಳಗ್ಗೆ ಸುಳ್ಯದಲ್ಲಿ ನಡೆದಿದೆ.

 

 

ಆತ್ಮಹತ್ಯೆ ಮಾಡಿಕೊಂಡವರನ್ನು ಪರಿವಾರಕಾನ ನಿವಾಸಿ ನಿವೃತ್ತ ಫಾರೆಸ್ಟರ್ ಮೋನಪ್ಪ ಗೌಡ ಎಂಬವರ ಮಗ ಸೋಮಶೇಖರ (45) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಹಿಂಬದಿಯ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group