ಇಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ➤ 66ನೇ ಮಹಾ ಪರಿನಿರ್ವಾಣ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 06. ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಸಂಜೆ 5 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮತ್ತು 66ನೇ ಮಹಾ ಪರಿನಿರ್ವಾಣ ದಿನಾಚರಣೆ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ಮಹಾತ್ಮಾ ಗಾಂಧಿ ವಿಶ್ವವಿದ್ಯಾನಿಲಯ ಕುಲಪತಿಗಳಾದ ಪ್ರೊ. ಆರ್.ಎಸ್. ಕುರೀಲ್ ಭಾಗವಹಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group