ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ಮುಂದಿನ ಐದು ವರ್ಷಗಳಲ್ಲಿ ಶೆ.75 ರಷ್ಟು ಅನುಷ್ಠಾನ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದ್ದಾರೆ.

ಅವರು ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ಯೋಜನೆಗಳನ್ನು ಆರಂಭಿಸುವವರಿಗೆ ಮಾತ್ರ ನಾವು ಅನುಮೋದನೆ ನೀಡಿದ್ದು, ಕೇವಲ ಅಂಕಿ ಅಂಶಗಳನ್ನು ತೋರ್ಪಡಿಸಲು ನಾವು ಸಮಾವೇಶಗಳನ್ನು ನಡೆಸಿಲ್ಲ. ಮುಂದಿನ 5 ವರ್ಷಗಳಲ್ಲಿ 75% ಯೋಜನೆಗಳು ಜಾರಿಗೆ ಬರಲಿವೆ ಎಂದರು.

error: Content is protected !!
Scroll to Top