ಬಾಡಿಗೆ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ- ಪೊಲೀಸ್ ದಾಳಿ ➤ ನಾಲ್ವರು ಅಂದರ್

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 07. ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಜೊತೆಗೆ ಮಾಂಸ ಧಂದೆ ನಡೆಸುತ್ತಿದ್ದ ಸ್ಥಳಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ವಶಕ್ಕೆ ಪಡೆದ ಘಟನೆ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ.

 

 

ಬಂಧಿತರನ್ನು ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್ ಹಾಗೂ ಇರ್ಶಾದ್ ಅಡ್ಯನಡ್ಕ ಎಂದು ಗುರಿತಿಸಲಾಗಿದೆ. ಮೊಹಮ್ಮದ್ ಇಕ್ಬಾಲ್ ಎಂಬಾತ ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದು, ಈತ ಈ ಹಿಂದೆ ಪಿಲಾರು, ಕಾಪಿಕಾಡು ಪ್ರದೇಶಗಳಲ್ಲೂ ಬಾಡಿಗೆ ಮನೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ.

Scroll to Top