(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಜೂ.13. ಮನೆಗೆ ಹಣ್ಣುಹಂಪಲು ತೆಗೆದುಕೊಂಡು ಹೋಗುತ್ತಿದ್ದ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಕಲ್ಲಡ್ಕದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಕಲ್ಲಡ್ಕ ನಿವಾಸಿ ಅಬೂಸಾಲಿ ಎಂಬವರ ಪುತ್ರ ಖಲೀಲ್ ಚೂರಿ ಇರಿತಕ್ಕೊಳಗಾಗಿ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರತ್ನಾಕರ್ ಶೆಟ್ಟಿ ಹಾಗೂ ರವಿಭಂಡಾರಿ ಎಂಬವರು ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದುಬಂದಿದೆ. ರತ್ನಾಕರ ಶೆಟ್ಟಿಯ ಕೈಗಳಿಗೂ ಗಾಯಗಳಾಗಿದ್ದು, ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಕಂಡುಬಂದಿದ್ದು, ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಅಂಗಡಿ ಮುಗ್ಗಟ್ಟುಗಳು ಬಂದಾಗಿವೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.