ಚಂಡಮಾರುತದ ಹಿನ್ನೆಲೆ ➤ ಕರಾವಳಿಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.09  ಬಂಗಾಲಕೊಳ್ಳಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ.12 ರವರೆಗೆ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ತಿಳಿಸಿದೆ.

ನೈಋತ್ಯ ಹಾಗೂ ಆಗ್ನೇಯ ಬಂಗಾಲಕೊಲ್ಲಿಯಲ್ಲಿ ಎದ್ದಿರುವ ಭಾರಿ ಚಂಡಮಾರುತದಿಂದ ನೆರೆಯ ರಾಜ್ಯಗಳಾದ ತಮಿಳುನಾಡು ,ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಬಾಗದಲ್ಲಿ ಭಾರಿ ಮಳೆಯಾಗುತ್ತಿದ್ದು,  ಇದರ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಹೊರತು ಪಡಿಸಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು, ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

error: Content is protected !!

Join the Group

Join WhatsApp Group