ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ.

ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ ಅಪರಿಚಿತ ವ್ಯಕ್ತಿಯ ಕುರಿತು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Also Read  ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                              

 

error: Content is protected !!
Scroll to Top