ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.

ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Also Read  ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

 

 

 

 

 

error: Content is protected !!
Scroll to Top