(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ 2022-23ನೇ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವು ನಾಳೆ ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದರ ಉದ್ಘಾಟನೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ನೆರವೇರಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಎಸ್. ಅವರು ಘನ ಉಪಸ್ಥಿತಿ ವಹಿಸುವರು. ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅಥಿತಿಗಳಾಗಿ ರಾಜ್ಯ ಸಭಾ ಸಂಸದರಾದ ಡಾ. ಡಿ. ವಿರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ., ರಾಜೇಶ್ ನಾಯ್ಕ್ ಯು., ಸಂಜೀವ ಮಠಂದೂರು, ಉಮಾನಾಥ ಎ. ಕೋಟ್ಯಾನ್, ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಶಾಸಕರಾದ ಕೆ. ಹರೀಶ್ ಕುಮಾರ್, ಬಿ.ಎಂ. ಫಾರೂಕ್, ಆಯನೂರು ಮಂಜುನಾಥ್, ಕೆ. ಪ್ರತಾಪ ಸಿಂಹ ನಾಯಕ್ ಹಾಗೂ ಮಂಜುನಾಥ ಭಂಡಾರಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎ.ವಿ. ತೀರ್ಥರಾಮ, ಮಂಗಳೂರು ಮಹಾಪೌರ ಜಯಾನಂದ ಅಂಚನ್ ಹಾಗೂ ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಎಂ. ಆಚಾರ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ವಿ. ಪೊನ್ನುರಾಜ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್., ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.