ವೈದ್ಯರ ಅನುಪಸ್ಥಿತಿಯಲ್ಲಿ ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ ಸಿಬ್ಬಂದಿಗಳು ➤ ತಾಯಿ- ಮಗು ಮೃತ್ಯು



(ನ್ಯೂಸ್ ಕಡಬ) newskadaba.com ಪಂಜಾಬ್, ಡಿ. 13.  ವೈದ್ಯರ ಅನುಪಸ್ಥಿತಿಯಲ್ಲಿ ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ ಪರಿಣಾಮ ಮಹಿಳೆ ಹಾಗೂ ಮಗು ಮೃತಪಟ್ಟ ಘಟನೆ ಇಲ್ಲಿನ ಜಾಚಾ ಬಚಾ ಆಸ್ಪತ್ರೆಯಲ್ಲಿ ನಡೆದಿದೆ.







 

ವೈದ್ಯರು ಇಲ್ಲದೇ ಆಸ್ಪತ್ರೆಯ ಸಿಬ್ಬಂದಿಗಳು ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ್ದು, ಇದರಿಂದಾಗಿ ತಾಯಿ-ಮಗು ಇಬ್ಬರೂ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವವರೆಗೆ ಅಂತ್ಯಸಂಸ್ಕಾರ ಮಾಡಲು ನಿರಾಕರಿಸಿದ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.






error: Content is protected !!
Scroll to Top