ಮಂಗಳೂರು: ಲಾಡ್ಜ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಪಂಪ್‌ವೆಲ್‌ನ ಲಾಡ್ಜ್‌ವೊಂದರಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಗಳವಾರದಂದು ವರದಿಯಾಗಿದೆ.

ಮೃತರನ್ನು ಕಾಸರಗೋಡು ಮೂಲದ ಅಬ್ದುಲ್ ಕರೀಂ (56) ಎಂದು ಗುರುತಿಸಲಾಗಿದೆ. ಮೃತದೇಹದ ಪಕ್ಕದಲ್ಲಿ ಕೆಲವು ಮಾತ್ರೆಗಳು ಪತ್ತೆಯಾಗಿದ್ದು, ಈ ಹಿಂದೆ ಮಹಿಳೆಯೊಬ್ಬರು ಮೃತ ವ್ಯಕ್ತಿಯನ್ನು ಭೇಟಿಯಾಗಿದ್ದರು ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

Scroll to Top