ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ…!

Theft, crime, Robbery


(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 13. ಮಹಿಳೆಯ ಸರ ಕಿತ್ತು ಪರಾರಿಯಾದ ಘಟನೆ ಇಡ್ಕಿದು ಗ್ರಾಮದ ಮಿತ್ತೂರು ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ.







ಮಹಿಳೆಯೊಬ್ಬರು ಮಿತ್ತೂರಿನಲ್ಲಿ ಬಸ್ಸಿನಿಂದು ಇಳಿದು ಕೋಲ್ಪೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಎದುರಿನಿಂದ ಆಕ್ಟೀವಾದಲ್ಲಿ ಬಂದ ಕಂದು ಬಣ್ಣದ ಟೀ ಶರ್ಟ್‌ ಧರಿಸಿದ ಯುವಕನೋರ್ವ ಸರ ಎಳೆದುಕೊಂಡು ಹೋಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಪರಾರಿಯಾಗಿದ್ದಾನೆ ಎಂದು ಮಹಿಳೆ ತಿಳಿಸಿರುವುದಾಗಿ ವರದಿಯಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top