(ನ್ಯೂಸ್ ಕಡಬ) newskadaba.com ಕೋಲಾರ, ಡಿ. 13. ಹಳ್ಳಬಿದ್ದ ರಸ್ತೆಗಳಲ್ಲಿ ಸಂಚರಿಸುವಾಗ ಗೂಡ್ಸ್ ಲಾರಿ ಪಲ್ಟಿಯಾದ ಘಟನೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.
ಕಾಟನ್ ತುಂಬಿದ್ದ ಲಾರಿಯು ಮಾಲೂರಿನಿಂದ ಬೆಂಗಳೂರಿಗೆ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.