ATM ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 13. ಎಟಿಎಂ ಒಳನುಗ್ಗಿದ ಕಳ್ಳರು ಎಟಿಎಂ ಯಂತ್ರವನ್ನೇ ಕಂಟೇನರ್ ನಲ್ಲಿ ಹೊತ್ತೊಯ್ದ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡಿ. 10ರಂದು ಹರಳೂರು ರಸ್ತೆಯ ಬ್ಯಾಂಕ್ ಆಫ್ ಬರೋಡಾದ ಎಟಿಎಂ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನೇ ಹೊತ್ತೊಯ್ದಿದ್ದು, ಮರುದಿನ ಬೆಳಗ್ಗೆ ಬ್ಯಾಂಕ್ ಅಧಿಕಾರಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬೆಳ್ಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top