ಬೆಳ್ತಂಗಡಿ: ಸ್ಕೂಟರ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 14. ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾರಾವಿಯಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ನಿತ್ಯ ಪೂಜಾರಿ (48) ಎಂದು ಗುರುತಿಸಲಾಗಿದೆ. ಇವರು ಕೌಕ್ರಾಡಿ–ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಆಟೋ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಪರಿಣಾಮ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top