(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ.14: ಲಾರಿಯೊಂದು ಢಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಈ ಘಟನೆ ಸಂಭವಿಸಿದೆ. ಲಾರಿಯನ್ನು ಕೇರಳದ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯದ್ದು ಎಂದು ಗುರುತಿಸಲಾಗಿದೆ.ಅಪಘಾತದ ಲಾರಿಯನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.