ಕೇರಳದಲ್ಲಿ ಹೆಚ್ಚುತ್ತಿರುವ ಹಕ್ಕಿಜ್ವರ ➤ 8 ಸಾವಿರ ಪಕ್ಷಿಗಳನ್ನು ಕೊಲ್ಲಲು ಆದೇಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 14.  ಕೊಟ್ಟಾಯಂ ಜಿಲ್ಲೆಯ ಎರಡು ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆ ಈ ಪ್ರದೇಶದ ಸುಮಾರು ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ 8 ಸಾವಿರ ಬಾತುಕೋಳಿ, ಕೋಳಿ ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶಿಸಲಾಗಿದೆ.

ಅರ್ಪೂಕರ ಮತ್ತು ತಾಳಯಾಳಂ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಈ ಕುರಿತು ಜಿಲ್ಲಾಧಿಕಾರಿ ಪಿ.ಕೆ. ಜಯಶ್ರೀ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದು, ಬಳಿಕ ಈ ನಿರ್ಧಾರ ಕೈಗೊಂಡಿದ್ದು, ಹಕ್ಕಿಜ್ವರ ಪೀಡಿತ ಪ್ರದೇಶಗಳ ಸುಮಾರು 8 ಸಾವಿರ ಬಾತುಕೋಳಿ, ಕೋಳಿ ಮತ್ತು ಇತರ ದೇಶೀಯ ಪಕ್ಷಿಗಳನ್ನು ಕೊಲ್ಲಲು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸಂಸ್ಥೆಗಳು ಮತ್ತು ಪಶುಸಂಗೋಪನಾ ಇಲಾಖೆಗೆ ಸೂಚಿಸಿದ್ದಾರೆ.

Also Read  ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ

error: Content is protected !!
Scroll to Top