(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ. 16. ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ಅಲ್ಪ ಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಸಂಗೀತ ಕುಟುಂಬದಿಂದ ಬಂದವರು, ಇವರ ತಂದೆ ಪಂಡಿತ್ ಬಿ. ಎನ್.ಪಾರ್ಥಸಾರಥಿ ನಾಯ್ಡ ಸಂಗೀತ ವಿದ್ವಾಂಸ. 70ರ ದಶಕದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟ ಮನೋರಂಜನ್, 800ಕ್ಕೂ ಹೆಚ್ಚು ಸಂಗೀತ ಆಲ್ಬಂ ರಚಿಸಿದ್ದಾರೆ.