ಬೋನಿಗೆ ಬಿದ್ದ ಚಿರತೆ  ➤ ನಿಟ್ಟುಸಿರು ಬಿಟ್ಟ ಸ್ಥಳೀಯರು                       

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 17. ಮೈಸೂರಿನ ಜನರ ನಿದ್ದೆಗೆಡಿಸಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕಳೆದ ಹಲವು ದಿನಗಳಿಂದ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಉಂಟು ಮಾಡಿತ್ತು ಎನ್ನಲಾಗಿದೆ.

ಸುರೇಂದ್ರ ಕುಮಾರ್ ಹಾಗೂ ವಿಜಯ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿ ಗ್ರಾಮದಲ್ಲಿ ಒಂದು ಬೋನ್ ಅನ್ನು ಇರಿಸಲಾಗಿತ್ತು. ಸದ್ಯ ಈ ಬೋನಿಗೆ ಚಿರತೆ ಬಿದ್ದಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದ ಚಿರತೆಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

Also Read  ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ...!

error: Content is protected !!
Scroll to Top