(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 17. ಭಟ್ಕಳ ತಾಲೂಕಿನ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ.
ಕಳೆದ ಹತ್ತಾರು ದಿನಗಳಿಂದ ಈ ಭಾಗದ ಜಾನುವಾರುಗಳಿಗೆ ಚರ್ಮಗಂಟು ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ. ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಮೃತಪಟ್ಟಿದೆ ಎನ್ನಲಾಗಿದೆ.