ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ  ➤ 8 ಮಂದಿಗೆ ಗಾಯ        

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 17. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಕ್ಕಿ  ಸಂಭವಿಸಿದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ಸೇತುವೆ ಬಳಿ ಸಂಭವಿಸಿದೆ.

ಬಿ.ಸಿ.ರೋಡ್ ನ ನೇತ್ರಾವತಿ ಸೇತುವೆ ಬಳಿ ಸೆಲಿನಾ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಹಾಗೂ ಸಜಿಪ ರೂಟ್ ನ ಶಾರದಾ ಬಸ್ ನಡುವೆ ಈ ಅಪಘಾತ ನಡೆದಿದ್ದು, ಘಟನೆಯಿಂದ ಬಸ್ ಚಾಲಕರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 8 ಮಂದಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಇದೇ ಸಂಧರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಇದೇ ಬಸ್ಸಿಗೆ ಡಿಕ್ಕಿಯಾಗಿದ್ದು ಯಾವುದೇ ಅಪಾಯವಾಗಿಲ್ಲ ಎನ್ನಲಾಗಿದೆ.

Also Read  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

error: Content is protected !!
Scroll to Top