ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.24. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವ ನಡೆಯಿತು.

ದೇಶದ ವಿವಿಧ ರಾಜ್ಯಗಳಿಂದ ಸಹಸ್ರಾರು ಭಕ್ತರು ಚಂಪಾ ಷಷ್ಠಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಕಳೆದ ಮೂರು ದಿನಗಳಿಂದ ಮಡೆಸ್ನಾನದ ಬದಲಿಯಾಗಿ ಎಡೆ ಸ್ನಾನ ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ.

ಚಂಪಾಷಷ್ಟಿಯ ಮೂರು ದಿನಗಳಲ್ಲೂ ಈ ಸೇವೆಯನ್ನು ನಡೆಸಲಾಗುತ್ತಿದೆ. ಧಾರ್ಮಿಕಧತ್ತಿ ಇಲಾಖೆಯ ನೇತೃತ್ವದಲ್ಲಿ ಈ ಸೇವೆಯನ್ನು ನಡೆಸಲಾಗಿದೆ. ದೇವಳದ ಪ್ರಾಂಗಣದಲ್ಲಿ ಭಕ್ತರು ದೇವರ ನೈವೇದ್ಯ ದ ಮೇಲೆ ಉರುಳು ಸೇವೆ ಸಲ್ಲಿಸಿದರು.

Also Read  ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ

error: Content is protected !!