ಮನೆಗೆ ಆಕಸ್ಮಿಕ ಬೆಂಕಿ ; ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com  ಬಂಟ್ಟಾಳ , ಡಿ 18 : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ . ನಷ್ಟ ಸಂಭವಿಸಿದ ಘಟನೆ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.

ದೇವಂದಬೆಟ್ಟು ಸುಂದರಿ,ಶುಭ ಆನಂದ ಬಂಜನ್ ಎಂಬುವವರಿಗೆ ಸೇರಿರುವ ಹಂಚಿನ ಹಳೆಯ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ, ಅಪಘಾತದಿಂದ  ಸುಮಾರು 6 ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Also Read  ಗೋದಾಮಿನಲ್ಲಿ ಅಗ್ನಿ ಅವಘಡ ➤3,400 ಜನರನ ಸ್ಥಳಾಂತರ

error: Content is protected !!
Scroll to Top