ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ



(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 19 : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಲಾಯಿತು. ಬಳಿಕ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ  ಶಿವಮೊಗ್ಗ ದಲ್ಲಿ ನಡೆದಿದೆ.





ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಿವರಾಜು  ಹಾಗೂ  ಬಂಧಿತನನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿ ಶಿವರಾಜು  ಅವರನ್ನು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಹಾಗೂ ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ ಶಿಫ್ಟ್ ಮಾಡಲಾಯಿತು ಎಂದು ತಿಳಿದು ಬಂದಿದೆ.






error: Content is protected !!
Scroll to Top