ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ► 200 ಗೋಣಿ ಅಕ್ಕಿ, ಲಾರಿ ಮತ್ತು ಟೆಂಪೋ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.25. ಬಿ.ಸಿ.ರೋಡಿನಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಬಂಟ್ವಾಳ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಬಂಟ್ವಾಳ ಬಿ.ಮೂಡ ಗ್ರಾಮದ ಶಾಂತಿಯಂಗಡಿ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ಪಡಿತರ ಅಕ್ಕಿಯನ್ನು ಒಂದು ಲಾರಿಯಿಂದ ಟೆಂಪೋವೊದಕ್ಕೆ ಲೋಡ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಅರುಣ್ ಕುಮಾರ್ ನೇತೃತ್ವದ ತಂಡವು ದಾಳಿ ನಡೆಸಿ 50 ಕೆ.ಜಿ.ಯ 200 ಗೋಣಿ ಚೀಲ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಅಕ್ಕಿಯ ಮೌಲ್ಯ 2.60 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದು, ಲಾರಿ, ಟೆಂಪೋ ಹಾಗೂ ಗೂಡ್ಸ್ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

Also Read  ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ಕಾರ್ಯಾಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಮತ್ತು ಕಂದಾಯ ಅಧಿಕಾರಿಗಳು ಹಾಜರಿದ್ದರು.

error: Content is protected !!
Scroll to Top