ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              



(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.





ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ.






ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ.

ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು ಎಗ್ಗಿಲ್ಲದೆ ನಡೆಯುತ್ತಿದೆ ಹಾಗೂ ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

error: Content is protected !!
Scroll to Top