(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20 ಮಂಗಳೂರು ವಿವಿ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ವಿವಿ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ಮಂಗಳೂರು ವಿವಿಯಲ್ಲಿ ಸಂಭವಿಸಿದೆ.
ಈ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು ಎನ್ನಲಾಗಿದೆ.
ಮಂಗಳೂರಿನ ಕೊಣಾಜೆಯ ಮಂಗಳೂರು ವಿವಿ ಯ ಆಡಳಿತ ಸೌಧಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದರು ಎಂದು ತಿಳಿದುಬಂದಿದೆ.
ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾರದೇ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು ಎನ್ನಲಾಯಿತು.