ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11 ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಈತ ಕಳವು ಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿದ್ದ 4 ಲಕ್ಷ 35 ಸಾವಿರ ರೂ. ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ ಮುಂತಾದವುಗಳನ್ನು ವಶಕ್ಕೆ ಪಡೆಯಲಾಗಿದೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

Also Read  ಬಿಹಾರ : ನಕಲಿ ಮದ್ಯ ಸೇವಿಸಿ 7 ಮಂದಿ ಸಾವು

error: Content is protected !!
Scroll to Top