ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ 

(ನ್ಯೂಸ್ ಕಡಬ) newskadaba.com  ಕಾಸರಗೋಡು, ಡಿ.21  19 ರ ಹರೆಯದ ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ಬಂಧಿತ ಆರೋಪಿಗಳನ್ನು ಮಧೂರು ಪಟ್ಲ ದ.ಜೆ. ಶೈನಿತ್ ಕುಮಾರ್ (30), ಉಪ್ಪಳ ಮಂಗಲ್ಪಾಡಿಯ ಮೋಕ್ಷಿತ್ ಶೆಟ್ಟಿ(43) ಮತ್ತು ಉಳಿಯತ್ತಡ್ಕ ದ.ಎನ್ ಪ್ರಶಾಂತ್(27) ಎಂದು ಗುರುತಿಸಲಾಗಿದೆ.  ಕಾಸರಗೋಡು ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಪಿ. ಚಂದ್ರಿಕಾ ನೇತೃತ್ವದ ತಂಡವು ಇವರನ್ನು ಬಂಧಿಸಿದೆ.  ಮಧ್ಯವರ್ತಿಯಾಗಿದ್ದ ಮಹಿಳೆಯೋರ್ವಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Also Read  ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ಸುಟ್ಟು ಕರಕಲಾದ ಯುವಕ..!

ಪಾನೀಯದಲ್ಲಿ ಮಾದಕ ವಸ್ತು ಬೆರೆಸಿ ನೀಡಿ ಅತ್ಯಾಚಾರ ನಡೆಸಲಾಗಿದೆ. ನೆರೆಮನೆಯ ಯುವಕನೋರ್ವ ಈಕೆಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ವಿವಾಹವಾಗುವ ಭರವಸೆ ನೀಡಿ ವಿವಿಧೆಡೆಗೆ ಕರೆದೊಯ್ದಿದ್ದು, ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಲ್ಲದೆ ಮಧ್ಯವರ್ತಿಯಾದ ಮಹಿಳೆ ಮೂಲಕ ಇತರರಿಗೂ ಯುವತಿಯನ್ನು ಒಪ್ಪಿಸಿದ್ದು ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ.

ಬಳಿಕ ಪೊಲೀಸರು ಯುವತಿಯಿಂದ ಮಾಹಿತಿ ಪಡೆದು ತನಿಖೆ ನಡೆಸಿದ್ದರು. ಕೃತ್ಯದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ತಿಳಿಸಿದ್ದಾರೆ.

 

error: Content is protected !!
Scroll to Top