ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ಕೌಶಲ್ಯ ಕರ್ನಾಟಕ ಯೋಜನೆಯಡಿ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಟ್ಯಾಲಿ, ಇಆರ್.ಪಿ, ಪ್ರೈಮ್ ಕೋರ್ಸ್‍ಗಳಲ್ಲಿ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ಪಡೆಯಲು ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ಅಭ್ಯರ್ಥಿಗಳು ಕೆ.ಜಿ.ಟಿ.ಟಿ.ಐ. ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ತರಬೇತಿಗೆ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ ಯೆಯ್ಯಾಡಿ, ಶರ್ಬತ್ ಕಟ್ಟೆ ಬಳಿ ಇರುವ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ. ಕಚೇರಿ ಅಥವಾ ದೂ.ಸಂಖ್ಯೆ: 0824-2211477, 8277741731 ಸಂಪರ್ಕಿಸುವಂತೆ ಕೆ.ಜಿ.ಟಿ.ಟಿ.ಐ. ನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಾಲೇಜು ಕಟ್ಟಡದಿಂದ ಹಾರಿ 21 ವರ್ಷದ ವಿದ್ಯಾರ್ಥಿನಿ ಸಾವು

error: Content is protected !!
Scroll to Top