ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಟ್ವೀಟ್ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಟ್ವೀಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ‌.


ಬಂಧಿತನನ್ನು ಬೆಂಗಳೂರಿನ ಕೂಡ್ಲುಗೇಟ್ ನಿವಾಸಿ ವೈಭವ್ ಗಣೇಶ್ ಎಂದು ಗುರುತಿಸಲಾಗಿದೆ. ಈತ ಡಿ. 10ರಂದು ತನ್ನ ಟ್ವಿಟರ್ ಖಾತೆಯಲ್ಲಿ, ನಾನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಟ್ವೀಟ್ ಮಾಡಿದ್ದ. ಅಲ್ಲದೇ ಇದನ್ನು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಗೂ ಟ್ಯಾಗ್ ಮಾಡಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಅಧಿಕಾರಿಗಳು ದೂರು ದಾಖಲಿಸಿದ್ದರು.

Also Read  ಮಕ್ಕಳ ಕಲಿಕೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ➤ ಕೆ.ಆರ್. ಗಂಗಾಧರ

error: Content is protected !!
Scroll to Top