ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು       

Theft, crime, Robbery

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಹಿಳೆಯ ಮಾಂಗಲ್ಯ ಸರ ಕಳ್ಳತನದ ವೇಳೆ ಖದೀಮನೊಬ್ಬ ಸಿಕ್ಕಿಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್ ರಸ್ತೆಯ ಸ್ಕೌಟ್ ಕ್ಯಾಂಪ್ ರಸ್ತೆಯ ಬಳಿ ಸಂಭವಿಸಿದೆ.

ಕಳ್ಳನು ಮಹಿಳೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯು ಕೆಲಸ ಮುಗಿಸಿ ಒಂಟಿಯಾಗಿ ಬರುತ್ತಿದ್ದದ್ದನ್ನು ಗಮನಿಸಿದ ಈತ ಕೃತ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಂಗಲ್ಯ ಸರ ಕಿತ್ತುಕೊಳ್ಳುತ್ತಿದ್ದಂತೆಯೇ ಮಹಿಳೆ ಕೂಗಿಕೊಂಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು, ಬಳಿಕ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Also Read  ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤  ಪೊಲೀಸರಿಗೊಪ್ಪಿಸಿದ ಸ್ಥಳೀಯರು

 

 

 

 

 

error: Content is protected !!
Scroll to Top