ಪಂಜ: ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ವತಿಯಿಂದ ► ಸಮರ್ಥನಾ ಸಮಾವೇಶ

(ನ್ಯೂಸ್ ಕಡಬ) newskadaba.com ಸುಳ್ಯ, ನ.27. ಕೇಂದ್ರ ಸರಕಾರದ ವಿವಿಧ ಜನಪರ ಯೋಜನೆಯಿಂದ ಪ್ರಭಾವಿತಗೊಂಡು ಅಲ್ಪಸಂಖ್ಯಾತರು ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ.

ಅವರು ಸುಳ್ಯ ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಪಂಜ ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ಸೋಮವಾರದಂದು ನಡೆದ ಸಮರ್ಥನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾದ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಹಾಜಿ ಮುನೀರ್ ಬಾವಾ, ಅಬ್ದುಲ್ ಕುಂಞಿ ನೇಲ್ಯಡ್ಕ, ಸಾಬು ಜೇಕಬ್, ಸುಳ್ಯ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಮೋರ್ಛಾ ಅಧ್ಯಕ್ಷ ಅಶ್ರಫ್ ಖಾಸಿಲೆ ಮೊದಲಾದವರು ಉಪಸ್ಥಿತರಿದ್ದರು.

Also Read  ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!

ಸುಳ್ಯ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಮೋರ್ಛಾ ಪ್ರ. ಕಾರ್ಯದರ್ಶಿ ಫಯಾಝ್ ಕಡಬ ಸ್ವಾಗತಿಸಿ, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ ವಂದಿಸಿದರು. ಶಿವಪ್ರಸಾದ್ ರೈ ಮೈಲೇರಿ ಮತ್ತು ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top