ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.23.  ಅಯ್ಯಪ್ಪ ಮಾಲಾಧಾರಿ  ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.

ಗಾಯಾಳು ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಮಂಗಳೂರು  ನಗರದ  ಕಪಿತಾನಿಯೋ ಶಾಲೆಯ ವಿದ್ಯಾರ್ಥಿಗೆ ಹಲ್ಲೆ ಆರೋಪ ಮಾಡಲಾಗಿದೆ. ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಎಚ್ಚರಿಕೆ ನೀಡಿದ್ದರು. ಆದರೆ ಮತ್ತೆ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Also Read  ಐವರು ಶಾಲಾ ಮಕ್ಕಳ ಮೇಲೆ ಹರಿದ ಕಾರ್ ➤ ಸ್ಥಳದಲ್ಲೇ ಮೂವರು ಮೃತ್ಯು..!

 

 

error: Content is protected !!
Scroll to Top