(ನ್ಯೂಸ್ ಕಡಬ) newskadaba.com ಕಡಬ, ನ. 28. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದು ಹಸುವಿನ ಮೇಲೆ ಹರಿದ ಪರಿಣಾಮ ಹಸು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರದಂದು ನಡೆದಿದೆ.
ಗೋಳಿಯಡ್ಕದಿಂದ ಪೇರಡ್ಕ ಹೊರಟಿದ್ದ ಡೀಕಯ್ಯ ಎಂಬವರು ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಶೀನಪ್ಪ ಗೌಡ ಎಂಬವರಿಗೆ ಸೇರಿದ ದನದ ಮೇಲೆ ಹರಿದ ಪರಿಣಾಮ ದನ ಸ್ಥಳದಲ್ಲೇ ಮೃತಪಟ್ಟಿದೆ.
ಘಟನೆಯಲ್ಲಿ ಕಾರು ಚಾಲಕ ಡೀಕಯ್ಯ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.