(ನ್ಯೂಸ್ ಕಡಬ) newskadaba.com ಸಿಕ್ಕಿಂ, ಡಿ.23 ಉತ್ತರ ಸಿಕ್ಕಿಂನ ಲಾಚೆನ್ ಪಟ್ಟಣದಲ್ಲಿ ಭಾರತೀಯ ಸೇನೆಯ ವಾಹನವು ಕಂದಕಕ್ಕೆ ಉರುಳಿದ ಪರಿಣಾಮ 16 ಯೋಧರು ಹುತಾತ್ಮರಾಗಿದ್ದು ನಾಲ್ವರ ಯೋಧರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಅಪಘಾತದಲ್ಲಿ ಸೇನಾ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ಏರ್ ಲಿಫ್ಟ್ ಮಾಡಲಾಗಿದೆ. ಹುತಾತ್ಮರಾದವರಲ್ಲಿ ಮೂವರು ಜೂನಿಯರ್ ಕಮಿಷರ್ ಅಧಿಕಾರಿಗಳು ಮತ್ತು 13 ಯೋಧರು ಸೇರಿದ್ದಾರೆ. ಯೋಧರ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು ಮರಣೋತ್ತರ ಪರೀಕ್ಷೆಗಾಗಿ ಗ್ಯಾಂಗ್‌ಟಾಕ್‌ನ ಸರ್ಕಾರಿ ಎಸ್‌ಟಿಎನ್‌ಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದ್ದು, ನಂತರ ಸೇನೆಗೆ ಹಸ್ತಾಂತರಿಸಲಾಗುತ್ತದೆ.