ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟ್ನಾ ಡಿ. 24. ಇಟ್ಟಿಗೆ ಭಟ್ಟಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನರೀರ್ ಗಿರ್ ಗ್ರಾಮದಲ್ಲಿ ವರದಿಯಾಗಿದೆ.

ಮೃತಪಟ್ಟಿರುವುದರಲ್ಲಿ ಇಟ್ಟಿಗೆ ಭಟ್ಟಿಯ ಮಾಲೀಕ ಮೊಹ್ಮದ್ ಇರ್ಷಾದ್ ಒಬ್ಬರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗಂಗ್ವಾರ್ ಹೇಳಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆ ಎಲ್ಲ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

Scroll to Top